ಬೆಂಗಳೂರು : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಜೊತೆ ಮಂಡ್ಯ ಕಾಂಗ್ರೆಸ್ ನಾಯಕರು ಊಟಕ್ಕೆ ಹೋಗಿದ್ದಕ್ಕೆ ಸಿಎಂ ಕುಮಾರಸ್ವಾಮಿ ಬೇಸರಗೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್ ಮಂಡ್ಯ ನಾಯಕರ ಪರ ನಿಂತಿದ್ದಾರೆ. ಮಂಡ್ಯ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತುಕತೆ ನಡೆಸುವ ವೇಳೆ ಅಲ್ಲಿಗೆ ಆಗಮಿಸಿದ ಜಮೀರ್ ಅಹಮ್ಮದ್ ಅವರು ಮಾತನಾಡಿ, ಊಟಕ್ಕೆ ಹೋಗುವುದು ತಪ್ಪಲ್ಲ. ಯಾರೇ ಕರೆದರೂ ಊಟಕ್ಕೆ ಹೋಗುತ್ತಾರೆ.