ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಆದಾಯಕ್ಕಿಂತ ಶೇ.2031ರಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.ಜಮೀರ್ ಮನೆ ಮೇಲೆ ದಾಳಿ ಪ್ರಕರಣ ಸಂಬಂಧ ಎಸಿಬಿ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಆಗಸ್ಟ್ 6 ರಂದು ಜಮೀರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಪತ್ತೆಯಾದ ದಾಖಲೆಗಳ ಆಧಾರದ ಮೇಲೆ ಎಸಿಬಿ ದಾಳಿ ನಡೆದಿದೆ