ಪದೇ ಪದೇ ವಿವಾದಿತ ಹೇಳಿಕೆ ನೀಡಿ ಪಕ್ಷದ ಮುಖಂಡರ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ಶಾಸಕರೊಬ್ಬರಿಗೆ ಪಕ್ಷದ ಮುಖಂಡರು ಮತ್ತೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡೋದಾಗಿ ಶಾಸಕ ಜಮೀರ್ ಅಹ್ಮದ್ ಘೋಷಣೆ ಮಾಡಿದ್ದು ಅವರಿಗೆ ಮುಳುವಾಗುತ್ತಿರುವಂತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದ್ದು, ವಯಕ್ತಿಕವಾಗಿ ಬಹಿರಂಗವಾಗದಂತೆ