ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರ ಮಿತಿಮೀರಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಗುಡುಗಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಒಳ್ಳೆಯ ಕೆಲಸ ಮಾಡಿದ್ದಾಗ ಹೋಗಳಿದ್ದೇನೆ. ಪಕ್ಷ ತೊರೆಯಬೇಡಿ ಎಂದು ಎಲ್ಲರಲ್ಲೂ ಮನವಿ ಮಾಡಿದ್ದೇನೆ ಎಂದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರಿ ನಷ್ಟವಾಗಿದ್ದು, ರಾಷ್ಟ್ರೀಯ ಮಟ್ಟದಲ್ಲೂ ದೊಡ್ಡ ಹೊಡೆದ ಆಗಲಿದೆ