ಬೆಂಗಳೂರು: ಆಂಬಿಡೆಂಟ್ ಕಂಪನಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಸಹಾಯಕ್ಕೆ ಬಿಜೆಪಿಯ ಯಾವೊಬ್ಬರು ನಾಯಕರೂ ಬರುತ್ತಿಲ್ಲ ಎಂದು ಬೇಸರಗೊಂಡಿದ್ದಾರಂತೆ.ತಮ್ಮ ಬೇಸರವನ್ನು ರೆಡ್ಡಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಅವರ ಆಪ್ತ ಮೂಲಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದೆ. ರೆಡ್ಡಿ ಜೈಲಿನಲ್ಲಿದ್ದಾಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಹಾಗಾಗಿ ಅವರ ಬಗ್ಗೆ