ಬೆಂಗಳೂರು: ಫೆಬ್ರವರಿಯಲ್ಲಿ ಪ್ರಾರಂಭವಾದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇದಕ್ಕಾಗಿ ಅರಮನೆ ಮೈದಾನ ಸಿದ್ಧಗೊಂಡಿದೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಈ ಸಮಾರಂಭ ನಡೆಯಲಿದೆ.ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು