ಜಂತಕಲ್ ಮೈನಿಂಗ್ ಕಂಪೆನಿಗೆ ಪರ್ಮಿಟ್ ಆರೋಪ ಕೇಸ್ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್ ನೀಡಿ ಆದೇಶ ಹೊರಡಿಸಿದೆ. ಜುಲೈ ಕೊನೆಯ ವಾರದವರೆಗೂ ಕುಮಾರಸ್ವಾಮಿಯವರನ್ನು ಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದ ನ್ಯಾಯಾಲಯ, ವಿಚಾರಣೆಯನ್ನು ಜುಲೈ ಕೊನೆಯ ವಾರಕ್ಕೆ ನಿಗದಿಪಡಿಸಿದೆ. ಈ ಹಿಂದೆ ಇದೇ ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರಿಗೆ ಜಾಮೀನು ನೀಡಲಾಗಿದೆ. ವಿಶೇಷ ತನಿಖಾ ತಂಡ ತನ್ನ ನಿಲುವು ಸ್ಪಷ್ಟಪಡಿಸುವಂತೆ ಸೂಚಿಸಿ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.