ಜಂತಕಲ್ ಮೈನಿಂಗ್ ಪ್ರಕರಣ ಕುರಿತಂತೆ ಹೈಕೋರ್ಟ್ ಪೀಠ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ರಿಲೀಫ್ ಒದಗಿಸಿದೆ. ಹೈಕೋರ್ಟ್ನ ಏಕಸದಸ್ಯ ಪೀಠ ಸುಪ್ರೀಂಕೋರ್ಟ್ನಲ್ಲಿ ಜಂತಕಲ್ ಮೈನಿಂಗ್ ತನಿಖಾ ವರದಿ ಸಲ್ಲಿಸುವವರೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ ಎಂದು ಕೋರ್ಟ್ ಮೂಲಗಳು ತಿಳಿಸಿವೆ. ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಬಯಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು.