ಬೆಳಗಾವಿ : ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು. ಶಾಸಕ ಸತೀಶ್ ಜಾರಕಿಹೊಳಿ ಅವರು ದುಡುಕುವವರಲ್ಲ, ಕಾಂಗ್ರೆಸ್ ಸಹವಾಸದಿಂದಾಗಿ ಅವರು ಈ ರೀತಿಯಾಗಿ ಮಾತನಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದರು. ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಿತ ಹೇಳಿಕೆಯನ್ನು ಹಿಂಪಡೆದು ಸಿಎಂಗೆ ಪತ್ರ ಬರೆದ ವಿಚಾರಕ್ಕೆ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಜಾರಕಿಹೊಳಿ ಮಾತನಾಡುವುದು ಅಷ್ಟೇ ಅಲ್ಲ, ಸಮರ್ಥನೆ