ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನಡೆದ ಉಪಹಾರ ಕೂಟಕ್ಕೆ ಸಚಿವ ರಮೇಶ ಜಾರಕಿಹೊಳಿ ಗೈರಾಗುವ ಮೂಲಕ ತಮ್ಮ ಕೋಪ ಇನ್ನೂ ಕಡಿಮೆಯಾಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ.ಕಾಂಗ್ರೆಸ್ ಸಚಿವರೆಲ್ಲ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ನಿವಾಸದಲ್ಲಿ ಉಪಹಾರ ಕೂಟ ಹಾಗೂ ಮಹತ್ವದ ಸಭೆ ನಡೆಸಿದರು. ಆದರೆ ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿದ್ದ ಸಚಿವ ರಮೇಶ ಜಾರಕಿಹೊಳಿ ಉಪಹಾರ ಕೂಟಕ್ಕೆ ಗೈರು ಹಾಜರಾಗುವ ಮೂಲಕ ತಮ್ಮ ಸಿಟ್ಟು ಈಗಲೂ ಕಡಿಮೆಯಾಗಿಲ್ಲ ಎಂಬುದನ್ನು ತೋರಿಸಿಕೊಟ್ಟರು.ಕಾಂಗ್ರೆಸ್