ಅಂತಾರಾಷ್ಟ್ರೀಯ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಗೆ ಪಿತೃ ವಿಯೋಗವಾಗಿದೆ. ಜಾವಗಲ್ ಶ್ರೀನಾಥ್ ರವರ ತಂದೆ ಚಂದ್ರಶೇಖರ್ (85) ನಿಧನರಾಗಿದ್ದಾರೆ.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರಶೇಖರ್ ಇಂದು ಕೊನೆಯುಸಿರೆಳೆದಿದ್ದಾರೆ. ಕುವೆಂಪುನಗರ ನಿವಾಸದಲ್ಲಿ ನಿಧನರಾಗಿದ್ದಾರೆ.ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರೋ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಅಂತ್ಯಕ್ರಿಯೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಭಾಗಿಯಾಗಿದ್ದರು.