ಮಂಡ್ಯ : ಜೆಡಿಎಸ್ ಮುಖಂಡರೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರಿನ ಟಿಬಿ ಸರ್ಕಲ್ ಬಳಿ ನಡೆದಿದೆ. ಹೊನ್ನಲಗೆರೆ ಪ್ರಕಾಶ್ (50) ಕೊಲೆಯಾದ ದುರ್ದೈವಿ. ಸೋಮವಾರ ಮಧ್ಯಾಹ್ನ ಮದ್ದೂರು ಪಟ್ಟಣದ ಟಿಬಿ ಸರ್ಕಲ್ ಬಳಿ ಕಾರಿನಲ್ಲಿ ಕುಳಿತಿದ್ದ ಪ್ರಕಾಶ್ರನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು, ಕತ್ತು ಸೀಳಿ ಪರಾರಿಯಾಗಿದ್ದಾರೆ. ಇದರಿಂದ ಪ್ರಕಾಶ್ ಕಾರಿನಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕಾಶ್