ಮಂಡ್ಯ : ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಎದುರಲ್ಲೇ ಕಬ್ಬಿನ ಬಾಕಿ ಹಣ ಕೇಳಿದ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಗುರುವಾರ ರಾತ್ರಿ ಸಿಎಂ ಕುಮಾರಸ್ವಾಮಿ ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ರೈತ ರವಿ ಅವರು, ಕಾರ್ಖಾನೆಗೆ ಕಬ್ಬು ಸಾಗಿಸಿ 6 ತಿಂಗಳಾಗಿವೆ. ಇನ್ನೂ ಹಣ ಬಂದಿಲ್ಲ. ನೀವು ಕಬ್ಬಿನ ದರ ನಿಗದಿ ಮಾಡಿಲ್ಲ.