ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಚಿತ್ರದುರ್ಗದ ಸಾಣೇಹಳ್ಳಿ ಶಿವಚಾರ್ಯ ಸ್ವಾಮೀಜಿ ನೀಡಿರುವ ಹೇಳಿಕೆ ಖಂಡಿಸಿ ಎಚ್ಡಿಕೆ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚನ್ನಪಟ್ಟಣ ನಗರದ ಅಂಚೆಕಚೇರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಶಿವಚಾರ್ಯ ಸ್ವಾಮೀಜಿ ವಿರುದ್ಧ ಭಿತ್ತಿಪತ್ರಗಳನ್ನ ಹಿಡಿದು ಮೌನ ಪ್ರತಿಭಟನೆ ನಡೆಸಿದಲ್ಲದೇ ಚನ್ನಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ರು. ಇನ್ನು ರಾಜ್ಯ ಮಠಮಾನ್ಯಗಳಿಗೆ ಹೆಸರುವಾಸಿಯಾಗಿದ್ದು ಶಿಕ್ಷಣ ಕ್ಷೇತ್ರಗಳಿಗೆ ತನ್ನದೇ ಆದ ಕೊಡುಗೆ