ಜೆಡಿಎಸ್ ಪಕ್ಷದ ಮುಖಂಡರು ಮುಸ್ಲಿಂ ಸಮುದಾಯದ ವಿರೋಧಿಯಾಗಿದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಮುಸ್ಲಿಂ ಸಮುದಾಯವನ್ನು ಕೆಲ ಮಟ್ಟಿಗೆ ಸಹಿಸಿಕೊಂಡು ನಂತರ ತುಳಿದು ಬಿಡ್ತಾರೆ. ಜೆಡಿಎಸ್ನಿಂದ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಗುಡುಗಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮುಂಬರುವ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಕ್ಷವೇ ಮತ್ತೆ ಸರಕಾರ ರಚಿಸಲಿದೆ. ಮಿಷನ್ 150 ಬಿಜೆಪಿಯದಲ್ಲ, ಕಾಂಗ್ರೆಸ್ ಪಕ್ಷದ್ದಾಗಿದೆ