ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೈತ್ರಿಗೆ ಮಾಜಿ ಪ್ರಧಾನಿ ದೇವೇಗೌಡರು ಒಪ್ಪಿಗೆ ಸೂಚಿದ್ದಾರಾ ಎನ್ನುವ ಪ್ರಶ್ನೆಗೂ, ಕಾದು ನೋಡಿ ಎಂದಷ್ಟೇ ಉತ್ತರಿಸಿದ್ದಾರೆ.ಮಾಜಿ