ಬೆಂಗಳೂರು: ರಾಹುಲ್ ಗಾಂಧಿ ಬಿ ಟೀಂ ಟೀಕೆಯ ನಂತರ ಒಂದೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ಪರಸ್ಪರ ಕೆಸರೆರಚಾಟ ಮಾಡುತ್ತಿದ್ದರೆ ಇನ್ನೊಂದೆಡೆ ಇದೇ ಎರಡು ಪಕ್ಷಗಳು ಟಿಕೆಟ್ ಹಂಚಿಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘ ಮನವಿ ಮಾಡಿದೆ.