ಬಿಜೆಪಿ ನೀಡಿದ್ದ ಬಂದ್ ಕರೆಗೆ ಪರ್ಯಾಯವಾಗಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ವ್ಯಾಪಾರಸ್ಥರಿಗೆ ಗುಲಾಬಿ ಹೂ ನೀಡಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡದಂತೆ ಮನವೊಲಿಸುತ್ತಿರುವ ಘಟನೆಗಳು ವರದಿಯಾಗಿವೆ. ರೈತರ ಸಾಲಮನ್ನಾಗೆ ಆಗ್ರಹಿಸಿ ಕರೆಯಲಾಗಿದ್ದ ಬಂದ್ಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದಲ್ಲದೇ ಕಾರ್ಯಕರ್ತರು ಅಂಗಡಿಗಳಿಗೆ ತೆರಳಿ ಗುಲಾಬಿ ನೀಡಿ ಧೈರ್ಯ ಹೇಳುತ್ತಿರುವುದು ಕಂಡು ಬಂದಿದೆ. ರಾಜ್ಯದ ಬಹತೇಕ ಜಿಲ್ಲೆಗಳಲ್ಲಿ ಬಿಜೆಪಿ ನೀಡಿದ್ದ ಕರೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಬಂದ್ಗೆ ಹೆದರದೆ ಧೈರ್ಯವಾಗಿ ವ್ಯಾಪಾರ ನಡೆಸಿ