ಮಾಜಿ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ವಿಶ್ವನಾಥ್ ತಮ್ಮ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿನ್ನೆಲೆಯಲ್ಲಿ ಇದೀಗ ತೆನೆ ಹೊತ್ತ ಮಹಿಳೆ ಗುರುತಿನ ಪಕ್ಷವು ನೂತನ ಸಾರಥಿಗಳನ್ನು ಆಯ್ಕೆಮಾಡಿಕೊಂಡಿದೆ.ರಾಜ್ಯ ಜೆಡಿಎಸ್ ಘಟಕಕ್ಕೆ ನೂತನ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.ಜೆಡಿಎಸ್ ರಾಜ್ಯ ಘಟಕದ ನೂತನ ಅಧ್ಯಕ್ಷರನ್ನಾಗಿ ಸಕಲೇಶಪುರ ಮತಕ್ಷೇತ್ರದ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪರನ್ನು ನೇಮಕ ಮಾಡಲಾಗಿದೆ.ನೂತನ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ನೇಮಕ ಸಂದರ್ಭದಲ್ಲಿಯೇ ವಿವಿಧ ಘಟಕಗಳಿಗೆ