ಹುಬ್ಬಳ್ಳಿ : ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ಉದ್ದೇಶಪೂರ್ವಕವಾಗಿ ನಮ್ಮ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದೆ. ಬಿಜೆಪಿ ಪರ ಒಲವು ತೋರುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಗುರುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳ ಕಣಕ್ಕಿಳಿಸಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಅಭ್ಯಂತರವಿಲ್ಲ. ಆದರೆ, ಎಲ್ಲಿ ಕಣಕ್ಕಿಳಿಸಬೇಕಿತ್ತೊ ಅಲ್ಲಿ ನಿಲ್ಲಿಸಿಲ್ಲ