ತುಮಕೂರು : ಬಜೆಟ್ ನಲ್ಲಿ ಗುಬ್ಬಿ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಘೋಷಣೆಯಾಗದಿದದ್ದಕ್ಕೆ ಸಿಎಂ ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ ಸಣ್ಣಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ಕಿಡಿಕಾರಿದ್ದಾರೆ. ಈ ಕುರಿತು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಸುಮಾರು 400 ಕೋಟಿ ರೂ ಬೇಡಿಕೆ ಇಟ್ಟಿದ್ದೆ. ಆದ್ರೆ ಬಸವಬೃಂಗ ಮಠಕ್ಕೆ 1 ಕೋಟಿ ಅನುದಾನ ಘೋಷಣೆ ಮಾಡಿರುವುದು ಬಿಟ್ಟರೆ ಇನ್ನು ಯಾವುದೇ ಘೋಷಣೆ ಆಗಿಲ್ಲ. ಇದರಿಂದ ನನಗೆ ನೋವಾಗಿದೆ