ನಿಸರ್ಗ ನಾರಾಯಣಪ್ಪರನ್ನು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿರುವುದನ್ನು ವಿರೋಧಿಸಿ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ತಿಳಿಸದೆ ನಾರಾಯಣಪ್ಪರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು ನೋವು ತಂದಿದೆ. ಆದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ರಾಜೀನಾಮೆ ಪತ್ರವನ್ನು ಸಭಾಪತಿಯವರಿಗೆ ರವಾನಿಸಿದ್ದು ಕೂಡಲೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಪಿಳ್ಳಮುನಿಶಾಮಪ್ಪ ತಮ್ಮ ರಾಜಿನಾಮೆ ಪತ್ರವನ್ನ ಸ್ಪೀಕರ್ ಕೋಳಿವಾಡ ಅವರಿಗೆ ನೀಡಿದ್ದು, ಕೂಡಲೇ