ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರಿಗೆ 50 ಲಕ್ಷ ರೂ. ನೀಡಲಾಗಿದೆ ಎಂದು ಕೋಲಾರದ ಜೆಡಿಎಸ ಶಾಸಕ ಕೆ. ಶ್ರೀನಿವಾಸ ಗೌಡ ಬಾಂಬ್ ಸಿಡಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು ಎಂಬ ಸುದ್ದಿ ಹಿನ್ನೆಲೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು. ಕೋಲಾರದ ಪರಿಷತ್ ಚುನಾವಣೆ ವೇಳೆ ಗೋವಿಂದ ರಾಜು ಗೆಲ್ಲಿಸಲು ಜೆಡಿಎಸ್ ಶಾಸಕರಿಗೆ 50 ಲಕ್ಷ ರೂ. ಲಂಚ ನೀಡಲಾಗಿದ್ದು,