ಬೆಂಗಳೂರು : ಗೋಹತ್ಯೆ ನಿಷೇಧ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಗೋಹತ್ಯೆ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ತಿದ್ದುಪಡಿ ಮಾಡಲು ಮುಂದಾಗಿದ್ದಾರೆ. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, 2010 ರಲ್ಲೂ ಬಿಜೆಪಿ ಸರ್ಕಾರ ಬಿಲ್ ಜಾರಿಗೆ ಮುಂದಾಗಿತ್ತು. ಆಗಲೂ ವಿರೋಧ ಮಾಡಿದ್ದೇವು. ಈಗಲೂ ವಿರೋಧಿಸ್ತೇವೆ ಎಂದು ತಿಳಿಸಿದ್ದಾರೆ.