ಮುಂದಿನ ವರ್ಷ 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಜೆಡಿಎಸ್ ಪಕ್ಷ ಅಖಾಡಾ ಸಿದ್ದಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರವಧಿ ಪೂರ್ಣಗೊಳಿಸಿದ ನಂತರ ಚುನಾವಣೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದರಂತೆ ಮುಂದಿನ ವರ್ಷದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ಪಕ್ಷ ತನ್ನ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಗಾಗಿ ಸ್ಥಳೀಯ ಮುಖಂಡರೊಂದಿಗೆ ಚರ್ಚೆ