ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ. ಸರಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೆರೆ ಸಂತ್ರಸ್ಥರ ಸಮಸ್ಯೆಗಳಿಗೆ ಸ್ಪಂದನೆ ತೋರುವಲ್ಲಿ ವಿಫಲವಾಗಿವೆ. ಬಿಜೆಪಿ ಸರಕಾರದ ನಡೆ ಖಂಡಿಸಿ ಸೆ. 10 ರಂದು ಬೆಂಗಳೂರಲ್ಲಿ ಪ್ರತಿಭಟನೆ ಮಾಡ್ತೇವೆ. ಹೀಗಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.ಎರಡು ತಿಂಗಳು ಕಳೆದರೂ ನೆರೆ ಪೀಡಿತರಿಗೆ ಪರಿಹಾರ ಹಣ ಸಿಕ್ಕಿಲ್ಲ.