ಮುಂಬರುವ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದು, 35-40 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿನ ಕೆಲ ಕ್ಷೇತ್ರಗಳಲ್ಲಿ ಗೊಂದಲಗಳಿವೆ. ಹೆಚ್ಚಿನ ಆಕಾಂಕ್ಷಿಗಳಿರುವುದು ಇದಕ್ಕೆ ಕಾರಣವಾಗಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಗೊಂದಲ ಬಗೆಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.