ಚುನಾವಣೆ ಫಲಿತಾಂಶದ ಬಳಿಕ ರಾಜ್ಯಾಧ್ಯಕ್ಷರ ನೇಮಕ: ಕುಮಾರಸ್ವಾಮಿ

guna| Last Modified ಶನಿವಾರ, 3 ಮೇ 2014 (15:30 IST)
ಬೆಂಗಳೂರು: ಲೋಕಸಭೆ ಬಂದ ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಕೃಷ್ಣಪ್ಪ ಹೃದಯಾಘಾತದಿಂದ ದಿಢೀರ್ ಮೃತಪಟ್ಟಿದ್ದರಿಂದ ರಾಜ್ಯಾಧ್ಯಕ್ಷ ಸ್ಥಾನ ಖಾಲಿಯಾಗಿ ಉಳಿದಿದೆ.

ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಜೆಡಿಎಸ್ ರಾಜ್ಯಾಧ್ಯಕ್ಷರನ್ನು ನೇಮಿಸುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಅಧಿಕಾರಿಗಳು ಮತ್ತು ಸಿಎಂ ನಡುವೆ ಸಮನ್ವಯತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಆದರೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ
ಹಣ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳು ಹೇಳ್ತಾರೆ ಎಂದು ಕುಮಾರಸ್ವಾಮಿ ಸರ್ಕಾರದ ವಿರುದ್ಧ ಲೇವಡಿ ಮಾಡಿದರು.
ಇದರಲ್ಲಿ ಇನ್ನಷ್ಟು ಓದಿ :