ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡದ ಜೆಡಿಎಸ್ ಪಕ್ಷಕ್ಕೆ ಈಗ ಸ್ವಾಭಿಮಾನ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದರೂ ಪಕ್ಷದ ಹಿತದೃಷ್ಟಿಯಿಂದ ನಾವು ಸಾಕಷ್ಟು ಬಾರಿ ಜೆಡಿಎಸ್ ಬೆಂಬಲಕ್ಕೆ ನಿಂತಿದ್ದೇವೆ. ಜಾತ್ಯತೀತ ತತ್ವವನ್ನು ಉಳಿಸಿಕೊಳ್ಳಲು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ