ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯರನ್ನು ಸೋಲಿಸಲು ಜೆಡಿಎಸ್ ರಣತಂತ್ರ ರೂಪಿಸಲು ಸಿದ್ದತೆ ನಡೆಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದರೆ, ಅವರ ಪ್ರಬಲ ಎದುರಾಳಿಯಾಗಿ ಜೆಡಿಎಸ್ ಪಕ್ಷದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ಮಾಜಿ ಸಂಸದ ಎಚ್.ವಿಶ್ವನಾಥ್, ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸುವ ಬಗ್ಗೆ ರಣತಂತ್ರ ರೂಪಿಸಿದ್ದಾರೆ