ಬಿಜೆಪಿಯ ವಿಸ್ತಾರಕ, ಕಾಂಗ್ರೆಸ್ನ ಮನೆ ಮನೆ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷ ಸೆಡ್ಡು ಹೊಡೆಯಲು ನಿರ್ಧರಿಸಿದೆ. ಜೆಡಿಎಸ್ ಪಕ್ಷದಿಂದ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವಿಸ್ತರಿಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಸಿದ್ದತೆ ನಡೆಸುತ್ತಿರುವಂತೆ ಜೆಡಿಎಸ್ ಕೂಡಾ ತಾನೇನು ಕಮ್ಮಿಯಿಲ್ಲ ಎನ್ನುವಂತೆ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮ ವಿಸ್ತರಿಸಲು ವರಿಷ್ಠರು ಹಸಿರು ನಿಶಾನೆ ತೋರಿದ್ದಾರೆ ಎಂದು ಪಕ್ಷದ