ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಮುಂಬರುವ ಚುನಾವಣೆ ಪ್ರಚಾರಕ್ಕೆ ರಾಜಕೀಯ ಪಕ್ಷಗಳು ಈಗಾಗಲೇ ಸ್ಟಾರ್ ಪ್ರಚಾರಕರನ್ನು ಕರೆತರಲು ಯತ್ನ ನಡೆಸುತ್ತಿದ್ದಾರೆ. ಜೆಡಿಎಸ್ ಇನ್ನೂ ಒಂದು ಹೆಜ್ಜೆ ಮುಂದು ಹೋಗಿ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ರನ್ನು ಕರೆತರಲು ಪ್ರಯತ್ನಿಸಿದೆ. ಕಾಂಗ್ರೆಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಗಾಳ ಹಾಕುತ್ತಿದ್ದರೆ, ಬಿಜೆಪಿ ಕಿಚ್ಚ ಸುದೀಪ್ ರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಆದರೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಮಗೆ ತೆಲುಗು ಚಿತ್ರರಂಗದಲ್ಲಿರುವ ಪ್ರಭಾವ