ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದಿಂದ ಅಸಮಾಧಾನಗೊಂಡಿರುವ ಘಟಾನುಘಟಿ ನಾಯಕರನ್ನು ಸೆಳೆಯಲು ತೆರೆಮರೆಯ ಕಸರತ್ತು ನಡೆಸಿದೆ ಎನ್ನಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್, ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರಾದ ಶ್ರೀನಿವಾಸ್ ಪ್ರಸಾದ್, ರೆಬಲ್ ಸ್ಟಾರ್ ಅಂಬರೀಶ್, ಸತೀಶ್ ಜಾರಕಿಹೊಳಿ ಹಾಗೂ ಹಿಂದುಳಿದ ವರ್ಗದ ನಾಯಕ ಸಿಎಂ ಇಬ್ರಾಹಿಂ ಅವರನ್ನು ಸೆಳೆಯಲು