ಜೋಧ್ಪುರದಲ್ಲಿ ಈದ್ ಸಂಭ್ರಮದ ಮೊದಲು ಹಿಂಸಾಚಾರ ಭುಗಿಲೆದ್ದಿತು. ಹಿಂಸಾಚಾರ ಘಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ಇದುವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ನಡೆಯುವ ಪ್ರತಿಯೊಂದು ಸಣ್ಣ ಘಟನೆಗಳ ಮೇಲೆ ನಿಗಾ ಇಡಲಾಗಿದೆ. ಜೋಧ್ಪುರದಲ್ಲಿ ಸಂಭವಿಸಿದ ಘಟನೆಗಳಿಗೆ ಸಂಬಂಧಿಸಿದಂತೆ ಒಟ್ಟು 97 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್