ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬೆಳಗಾವಿ ಅಧಿವೇಶನದ ನಂತರ ಉರುಳುವುದು ಖಚಿತ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ಅಧಿವೇಶನ ನಡೆಯುವ ವೇಳೆ ಸರ್ಕಾರ ಪತನವಾಗುತ್ತದೆ. ಶಾಸಕರ ಒಂದು ತಂಡ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ. ಸರ್ಕಾರ ಅಲುಗಾಡುತ್ತಿದೆ ಎನ್ನುವುದು ಸತ್ಯ. ಅದರಲ್ಲಿ ಅನುಮಾನವೇ ಇಲ್ಲ. ಮುಂದೇನಾಗಲಿದೆ ಎಂಬುದನ್ನು ಅಧಿವೇಶನದವರೆಗೆ ಕಾದು ನೋಡಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್