ಧಾರವಾಡ : ಮಕ್ಕಳಲ್ಲಿ ಗಣಿತ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳ ವಿಭಿನ್ನ, ವಿಶಿಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಕೂಡಾ ಆಯೋಜಿಸಬೇಕು.ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂಪಾಯಿ, ದ್ವಿತೀಯ ಸ್ಥಾನ 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ