ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ ಪೊಲೀಸ್ ದೂರು ದಾಖಲಿಸಿರುವುದು ಸರಿಯಾದ ಕ್ರಮವಲ್ಲ ಮತ್ತು ಖಂಡನೀಯ ಎಂದು ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ತಿಳಿಸಿದೆ.ಪತ್ರಿಕೆಯಲ್ಲಿ ಬಂದಿರುವ ಸುದ್ದಿ ಉದ್ದೇಶಪೂರಿತವಾಗಿದ್ದರೆ, ಸುಳ್ಳು ಮಾಹಿತಿಯಾಗಿದ್ದರೆ ಸ್ಪಷ್ಟನೆ, ವಿವರಣೆ ಕೊಡುವುದು ಕ್ರಮಬದ್ದವಾದದ್ದು. ಅದನ್ನು ಬಿಟ್ಟು ಸುದ್ದಿ ನೆಪ ಮಾಡಿ ದೂರು ದಾಖಲಿಸಿರುವುದು ದ್ವೇಷದ ನಡವಳಿಕೆಗೆ ಇಂಬು ನೀಡಿದಂತಾಗಿದೆ.ಈ ಹಿಂದೆಯೂ ಪತ್ರಕರ್ತರ ಮೇಲಿನ ಹಲವು ಪ್ರಕರಣಗಳ ಬಗ್ಗೆ ತಮ್ಮ ಗಮನಕ್ಕೆ ತಂದಾಗ ತಾವು ಸ್ಪಂದಿಸಿದ್ದೀರಿ.