ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಆವರಣದಲ್ಲಿ ನಿಲ್ಲಿಸಿದ್ದ ಎರಡು ದುಬಾರಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾರ್ವೆಬಾವಿಪಾಳ್ಯದ ಸಾಗರ್ ತಾಪ (19),ಬಂಡೆಪಾಳ್ಯದ ನವೀನ್ ಕಾಳಪ್ಪ (22), ಶ್ರೀಧರ್ಗೌಡ (20)ನನ್ನು ಸೋಮವಾರ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಒಬ್ಬೊಬ್ಬರು ಒಂದೊಂದು ರೀತಿಯ ಗೊಂದಲಕಾರಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಹಾಗೂ ಪ್ರಕರಣಕ್ಕೂ