ರಾಜ್ಯದಲ್ಲಿ ನಡೆದಿರುವ ಪಿಎಸ್ ಐ ಪರೀಕ್ಷಾ ಅಕ್ರಮ ಕುರಿತ ತನಿಖೆಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಸ್ ಐ ಅಕ್ರಮದಲ್ಲಿ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಆದ್ದರಿಂದ ಸಿಐಡಿ ತನಿಖೆಯಿಂದ ನ್ಯಾಯ ದೊರಕುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ ಎಂದರು. ಪಿಎಸ್ ಐ ಅಕ್ರಮ ನಡೆದಿದೆ ಎಂದು