ಮಧ್ಯಪ್ರದೇಶದಂತೆ ರಾಜ್ಯದಲ್ಲೂ ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೊಳಿಸಲು ಮುಖ್ಯಮಂತ್ರಿ ಜೊತೆಗೆ ಮಾತನಾಡುತ್ತೇನೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಜಯಪುರದಲ್ಲಿ ನಡೆದ ದಾನಮ್ಮ ಪ್ರಕರಣದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ, ಪ್ರಕರಣವನ್ನು ಮುಖ್ಯಮಂತ್ರಿಯವರು ಸಿಐಡಿಗೆ ರೆಫರ್ ಮಾಡಿದ್ದಾರೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಮಧ್ಯಪ್ರದೇಶದಲ್ಲಿ ಜಾರಿಗೊಳಿಸಿರುವ ಕಾನೂನಿನ ವರದಿ ತರಿಸಿಕೊಂಡು ನಮ್ಮ ರಾಜ್ಯದಲ್ಲೂ ಆ ಕಾನೂನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಪತ್ರಕರ್ತೆ