ಶಿವಮೊಗ್ಗ: ಜೋಗ ಜಲಪಾತಕ್ಕೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಆತಂಕ ಸೃಷ್ಟಿಯಾಗಿದೆ. ಮೃತದೇಹ ಹುಡುಕಲೆಂದು ಮಂಗಳವಾರ ಮಧ್ಯಾಹ್ನ ಮೈಸೂರು ಬಂಗಲೆ ಬಳಿಯ ಮೆಟ್ಟಿಲುಗಳ ಮೂಲಕ ಜಲಪಾತದ ಗುಂಡಿಗೆ ಇಳಿದಿದ್ದ ಜ್ಯೋತಿರಾಜ್ ತಂಡ ತಟದಲ್ಲಿ ಶೋಧ ನಡೆಸಿತ್ತು. ನಂತರ ರಾಜ ಹಾಗೂ ರೋರರ್ ಜಲಪಾತದ ಮಧ್ಯೆ ಗುಹೆಯಂತಿರುವ ಪ್ರದೇಶದ ಬಳಿ ಹೋದ ಜ್ಯೋತಿರಾಜ್ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ