ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷರ ಕುರಿತಾದ ಚರ್ಚೆಗೆ ಸಿಎಂ ನಿವಾಸದಲ್ಲಿ ಕರೆದಿದ್ದ ಉಪಾಹಾರಕೂಟ ಮುಕ್ತಾಯಗೊಂಡಿದೆ. ಸಭೆಯಲ್ಲಿ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. ಸಭೆ ಬಳಿಕ ಮಾತನಾಡಿದ ಪರಮೇಶ್ವರ್, ನನ್ನನ್ನ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಸುವ ಬಗ್ಗೆ ಚರ್ಚೆ ನಡೆದಿದೆ. ಹೊಸಬರನ್ನ ತರುವ ಕುರಿತಂತೆಯೂ ಅಭಿಪ್ರಾಯ ಸಂಗ್ರಹಿಸಿರಬಹುದು ಎಂದು ತಿಳಿಸಿದ್ದಾರೆ. ಇದೇವೇಳೆ, 2018ರ ಚುನಾವಣೆ ಮತ್ತು