ಗಣಪತಿ ಪ್ರಕರಣದ ತನಿಖೆಗೆ ಕೇಂದ್ರ ಸರಕಾರ ಆದೇಶ ನೀಡಿಲ್ಲ. ಕೋರ್ಟ್ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದ್ದು ಸಚಿವ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಗಣಪತಿ ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿರುವ ಸಚಿವ ಜಾರ್ಜ್ರನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಹರಿಹಾಯ್ದರು. ನಗರಾಭಿವೃದ್ಧಿ ಖಾತೆ ಸಚಿವ