ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಸಿಎಂ ಆಪ್ತ ಕೆ.ಮರಿಗೌಡನನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರಿಗೆ ಧಮ್ಕಿ ಹಾಕಿದ್ದ ಮರಿಗೌಡನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದು, ಈ ಕುರಿತು ಮೈಸೂರು ಘಟಕಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.