ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಕೆ.ಪಿ.ನಂಜುಂಡಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಂಜುಂಡಿಯವರಿಗೆ ಉಪಾಧ್ಯಕ್ಷ ಸ್ಥಾನ ನೀಡಿ ಗೌರವಿಸಲಾಯಿತು. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ. ಒಂದು ಅಟೆಂಡರ್ ಕೆಲಸ ಕೊಟ್ಟರೂ ಮನಪೂರ್ವಕವಾಗಿ ನಿರ್ವಹಿಸುವುದಾಗಿ ನಂಜುಂಡಿ ಘೋಷಿಸಿದ್ದರು. ನಂಜುಂಡಿಯವರಿಗೆ ಶೀಘ್ರದಲ್ಲಿ ಉತ್ತಮ ಹುದ್ದೆ ನೀಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದ್ದರು. ಅದರಂತೆ,