ಸಂಗೊಳ್ಳಿ ರಾಯಣ್ಣ ಬ್ರಿಗೇಡ್ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿದೆ. ರಾಯಣ್ಣ ಬ್ರಿಗೇಡ್ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಿ ಬೆಂಗಳೂರು ನಗರದ ಬಿಜೆಪಿ ಜಿಲ್ಲಾಧ್ಯಕ್ಷ ಸದಾಶಿವ ಆದೇಶ ಹೊರಡಿಸಿದ್ದಾರೆ. ಪಕ್ಷ ವಿರೋಧಿ ಕೆಲಸದಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್