ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ತಪ್ಪಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಹೇಳಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ಅವರು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ತಪ್ಪಲ್ಲ ಎಂದು ಸೂಚನೆ ನೀಡಿದ್ದಾರೆ ಎಂದರು.