ಬಾಗಲಕೋಟೆ : ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ಇಬ್ರಾಹಿಂ ಸುತಾರ(76) ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಸಾವನ್ನಪ್ಪಿದ್ದಾರೆ.ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು