ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆ ಪುನಾರಂಭವಾಗಿದೆ. ಇದಕ್ಕಾಗಿ ಹೊಸಪೇಟೆ ಹಾಗೂ ಕೊಪ್ಪಳದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಹೊಸಪೇಟೆಯ ಪುನೀತ್ ರಾಜ್ಕುಮಾರ್ ಜಿಲ್ಲಾ ಕ್ರೀಡಾಂಗಣ ಹಾಗೂ ಮಧ್ಯಾಹ್ನ 4 ಗಂಟೆಗೆ ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ‘ಕೈ’ ಪಡೆ ಮುಂದಾಗಿದೆ. ಬಳ್ಳಾರಿ, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ 15 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕೈ ಪಡೆ ‘ಪ್ರಜಾಧ್ವನಿ’ ಯಾತ್ರೆಯ