ಚುನಾವಣೆ ಸನಿಹದಲ್ಲಿ ಟಿಕೆಟ್ ಪಾಲಿಟಿಕ್ಸ್ ಜೋರಾಗಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಪ್ರಕಟಿಸುವ ಸಾಧ್ಯತೆಯಿದೆ. ಕಳೆದ ವಾರ ಬೆಂಗಳೂರಿನ ಹೋಟೆಲ್ನಲ್ಲಿ ಸ್ಕ್ರೀನಿಂಗ್ ಕಮಿಟಿ ಸದಸ್ಯರು, ವಿಪಕ್ಷ ನಾಯಕ ಸಿದ್ದರಾಮಯ್ಯ , KPCC ಅಧ್ಯಕ್ಷ D.K. ಶಿವಕುಮಾರ್ ಜೊತೆಗೂಡಿ 170 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಅಖೈರು ಮಾಡಿ ದೆಹಲಿಗೆ ಕಳಿಸಿಕೊಟ್ಟಿದ್ದರು.